alex Certify ರೈತರಿಗೆ ಮಾರಕವಾದ ಕೃಷಿ ಕಾಯ್ದೆ ವಾಪಸ್, ಶೇ. 57 ರಷ್ಟು ಖಾಲಿ ಹುದ್ದೆ ಭರ್ತಿ: ಚಲುವರಾಯಸ್ವಾಮಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮಾರಕವಾದ ಕೃಷಿ ಕಾಯ್ದೆ ವಾಪಸ್, ಶೇ. 57 ರಷ್ಟು ಖಾಲಿ ಹುದ್ದೆ ಭರ್ತಿ: ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಹಂತ ಹಂತವಾಗಿ ವಾಪಸ್ ಪಡೆಯಲಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ,

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ರೈತರಿಗೆ ಮಾರಕವಾದ ಕೆಲವು ಕೃಷಿ ಕಾಯ್ದೆ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಕೃಷಿ ಇಲಾಖೆಯಲ್ಲಿ ಶೇಕಡ 57 ರಷ್ಟು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಕೂಡ ಭರ್ತಿ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ಈ ಸಮಸ್ಯೆ ಪರಿಹಾರಕ್ಕೆ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...