alex Certify BIG NEWS: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ಶಾಸಕ, ಸಚಿವ ಸ್ಥಾನ ಕೊಟ್ರೆ ಪಕ್ಷ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ಶಾಸಕ, ಸಚಿವ ಸ್ಥಾನ ಕೊಟ್ರೆ ಪಕ್ಷ ಸೇರ್ಪಡೆ

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಬಿಜೆಪಿಗೆ ಹತ್ತಿರವಾಗುತ್ತಿರುವುದು ಇತ್ತೀಚೆಗೆ ಚರ್ಚೆಗೆ ಒಳಗಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮಹೇಶ್ ಅವರು, ಸಚಿವ ಸ್ಥಾನ ನೀಡಿದರೆ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿದ್ದಾರೆ. ಬಿಳಿಗಿರಿರಂಗನಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿ ಸೇರುವ ಬಗ್ಗೆ ನಾನಿನ್ನು ತೀರ್ಮಾನ ಕೈಗೊಂಡಿಲ್ಲ. ಸಂಕ್ರಾಂತಿ ಮುಗಿದ ನಂತರ ಚರ್ಚೆ ನಡೆಸಬಹುದು. ಆದರೆ, ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಅಂತಹ ಸಂದರ್ಭ ಸೃಷ್ಟಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ನನ್ನ ಬೆಂಬಲಿಗರು ಮತ್ತು ಕಾರ್ಯಕರ್ತರು ನನಗೊಂದು ಸ್ಥಾನಮಾನ ದೊರೆತರೆ ಜಿಲ್ಲೆ ಮತ್ತು ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಬಿಜೆಪಿ ಸೇರ್ಪಡೆ ಕುರಿತಾಗಿ ನಿರ್ಧಾರ ಕೈಗೊಳ್ಳಬಹುದು ಎನ್ನುವ ಅಪೇಕ್ಷೆಯನ್ನು ಹೊಂದಿದ್ದಾರೆ ಎಂದು ಮಹೇಶ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...