
ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಗಾರ್ಜಿಯಸ್ ನಟಿ ನಭಾ ನಟೇಶ್ ಇಂದು 28ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆಕಂಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ವಜ್ರಕಾಯ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ನಂತರ ‘ಲೀ’ ಹಾಗೂ ‘ಸಾಹೇಬ’ ಸಿನಿಮಾದಲ್ಲಿ ತೆರೆಹಂಚಿಕೊಂಡರು.
2018ರಲ್ಲಿ ‘ನನ್ನು ದೋಚುಕುಂದುವಟೆ’ ಹಾಗೂ ‘ಅದುಗೊ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ಇತ್ತೀಚೆಗೆ ಸಿನಿಮಾ ರಂಗದಿಂದ ದೂರ ಉಳಿದಿರುವ ಇವರು ತಮ್ಮ ಹಾಟ್ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇಂದು ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.