ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿ ಭಾರತೀಯರು ಸೇರಿದಂತೆ ಇಸ್ರೇಲ್ ಜನತೆಯ ಕೆಂಗಣ್ಣಿಗೆ ಗುರಿಯಾಗಿರುವ ನಿರ್ದೇಶಕ ನಡಾವ್ ಲಾಪಿಡ್ ಈಗ ಸ್ಪಷ್ಟನೆ ನೀಡಿದ್ದಾರೆ.
ಕಾಶ್ಮೀರಿ ಪಂಡಿತರನ್ನು ಅವಮಾನಿಸುವ ಯಾವುದೇ ಉದ್ದೇಶ ತಮಗಿಲ್ಲ ಎಂದು ಹೇಳಿರುವ ಅವರು, ಇದರಿಂದ ಯಾರಿಗಾದರೂ ನೋವಾಗಿದ್ದರೆ ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾರೆ.
ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್ ನಿರ್ದೇಶಕ ನಡಾವ್ ಲಾಪಿಡ್, ‘ದಿ ಕಾಶ್ಮೀರ್ ಫೈಲ್ಸ್’ ಒಂದು ಅಸಭ್ಯ ಹಾಗೂ ರಾಜಕೀಯ ಪ್ರೇರಿತ ಚಿತ್ರ ಎಂದು ಹೇಳುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.