ರಾಮನಗರ : ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರ ಧರಿಸಿರಬೇಕು, ಆಗ ಮಾತ್ರ ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಅಪಘಾತ ಹೆಚ್ಚುತ್ತಿರುವ ಹಿನ್ನೆಲೆ ಅಪಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಹೆದ್ದಾರಿಗಳಲ್ಲಿ ಪರಿಶೀಲನೆ ನಡೆಸಿ ಅಪಘಾತ ಸಂಖ್ಯೆ ಹೆಚ್ಚಳದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿದ್ದರೆ ವಾಹನ ಸವಾರರಿಗೆ ಒಂದು ಭಯ ಇರುತ್ತದೆ, ಆಗ ವಾಹನ ಸವಾರರು ತಮ್ಮ ವೇಗ ಕಡಿಮೆ ಮಾಡುತ್ತಾರೆ. ಆದ್ದರಿಂದ ಪೊಲೀಸರು ಹೆದ್ದಾರಿಗಳಲ್ಲಿ ಪೊಲೀಸ್ ಸಮವಸ್ತ್ರ ಅಥವಾ ಜಾಕೆಟ್ ಧರಿಸಿ ಗಸ್ತು ತಿರುಗಬೇಕು ಎಂದರು. ಅವೈಜ್ಞಾನಿಕ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಅಧಿಕಾರಿಗಳಿಂದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹೆದ್ದಾರಿಯಲ್ಲಿ ಕೆಲವೆಡೆ ಇಂಜಿನಿಯರಿಂಗ್ ಲೋಪದೋಷಗಳ ಸರಿಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಪ್ರಾರಂಭವಾದ ದಿನದಿಂದ 568 ಅಪಘಾತಗಳು ಸಂಭವಿಸಿದ್ದು, 158ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.