ನಟ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೋಟೋ ವೈರಲ್ ಆಗಿದೆ. ಅಕ್ಕಿನೇನಿ ನಾಗಾರ್ಜುನ ಮನೆಯಲ್ಲಿ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಾಗಾರ್ಜುನ, “ನಮ್ಮ ಮಗ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರ ನಿಶ್ಚಿತಾರ್ಥವನ್ನು ಇಂದು ಬೆಳಿಗ್ಗೆ 9:42 ಕ್ಕೆ ನೆರವೇರಿಸಲಾಯಿತು. ಅವಳನ್ನು (ಶೋಭಿತಾ ಧುಲಿಪಾಲ )ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗಳಿಗೆ ಅಭಿನಂದನೆಗಳು! ಅವರಿಗೆ ಜೀವಮಾನದ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಆಶೀರ್ವದಿಸಲಿ! ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ನಾಗ ಚೈತನ್ಯ ಮತ್ತು ಸೋಭಿತಾ ಕಳೆದ ಎರಡು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ನಾಗ ಚೈತನ್ಯ ಸಮಂತಾ ಜೊತೆ ವಿಚ್ಛೇದನ ಬಳಿಕ ಸೋಭಿತಾ ಅವರ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು ಎಂದು ಹೇಳಲಾಗಿದೆ. ಎಲ್ಲಾ ವದಂತಿಗಳಿಗೆ ಇದೀಗ ತೆರೆ ಬಿದ್ದಿದ್ದು, ನಟ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.