ನಾಗಾಲ್ಯಾಂಡ್ ನ ತ್ಸೆಮಿನಿಯು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ವೇಗವಾಗಿ ಬಂದ ಟ್ರಕ್ ಗೆ ಅವರು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಎಲ್ಲಾ 8ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. .
ರಾಜ್ಯ ರಾಜಧಾನಿ ಕೊಹಿಮಾದಿಂದ ಮೊಕೊಕ್ ಚುಂಗ್‌ಗೆ ತೆರಳುತ್ತಿದ್ದ ಟ್ರಕ್ ಗೆ ಕಾರ್ ಡಿಕ್ಕಿ ಹೊಡೆದಿದೆ. ಟ್ಸೆಮಿನಿಯು ಪೊಲೀಸರ ಪ್ರಕಾರ, ಲಿಮ್ ಟ್ರಾವೆಲ್ಸ್ ಅಡಿಯಲ್ಲಿ ನೋಂದಾಯಿಸಲಾದ ಎಸ್.ಯುವಿ.ಯಲ್ಲಿದ್ದ ಇಬ್ಬರು ಪುರುಷರು ಮತ್ತು ಆರು ಮಹಿಳೆಯರು ಅಪಘಾತದಿಂದ ಸಾವನ್ನಪ್ಪಿದ್ದಾರೆ.
ಮೆರಾಪಾನಿಯಿಂದ ಕೊಹಿಮಾಗೆ ಮರಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ವಾಹನ ನಜ್ಜುಗುಜ್ಜಾಗಿದೆ. ಹಲವಾರು ಅಡಿ ಕೆಳಗೆ ಬೀಳುವ ಮೊದಲು ಹೆದ್ದಾರಿಯಲ್ಲಿ ಸ್ವಲ್ಪ ದೂರಕ್ಕೆ ಎಳೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್ಲಾ ಕಾನೂನು ವಿಧಿವಿಧಾನಗಳನ್ನು ಅನುಸರಿಸಿ ಮೃತದೇಹಗಳನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು. ದುರಂತ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಟ್ರಕ್ ಚಾಲಕ ಮತ್ತು ಟ್ರಕ್‌ನಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಸೇರಿದಂತೆ ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.
ಮುಖ್ಯಮಂತ್ರಿ ನೆಫಿಯು ರಿಯೊ ಅವರು ಪ್ರಯಾಣಿಕರ ಸಾವಿಗೆ ಸಂತಾಪ ಸೂಚಿಸಿದರು ಮತ್ತು ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.