ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ.
ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು ರಿಯೊ ಅವರು ತಮ್ಮ ಪಕ್ಷ ಮತ್ತು ಮಿತ್ರ ಪಕ್ಷವಾದ ಬಿಜೆಪಿ ಹೆಚ್ಚು ಸ್ಥಾನ ಗಳಿಸುವುದರೊಂದಿಗೆ ಸತತ ಐದನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಎರಡು ಪಕ್ಷಗಳು ಒಟ್ಟಾಗಿ 35 ಸ್ಥಾನಗಳನ್ನು ಪಡೆದುಕೊಂಡಿವೆ. ಈ ಗೆಲುವಿನೊಂದಿಗೆ ಈಶಾನ್ಯ ರಾಜ್ಯವನ್ನು ಮೂರು ಬಾರಿ ಮುನ್ನಡೆಸಿದ್ದ ಹಿರಿಯ ನಾಯಕ ಎಸ್‌ಸಿ ಜಮೀರ್ ಅವರ ದಾಖಲೆಯನ್ನು ನೇಫಿಯು ರಿಯೊ ಮುರಿದಿದ್ದಾರೆ. ಎನ್‌ಡಿಪಿಪಿ 23 ಸ್ಥಾನಗಳನ್ನು ಗೆದ್ದಿದೆ ಮತ್ತು ಬಿಜೆಪಿ 12 ಸ್ಥಾನಗಳನ್ನು ಗೆದ್ದಿದೆ, ಜಂಟಿಯಾಗಿ 35 ಸ್ಥಾನಗಳಲ್ಲಿ ಜಯಗಳಿಸಿವೆ.
ಹೆಖಾನಿ ಜಖಾಲು ಅವರು ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ನಿರ್ಮಿಸಿದ್ದಾರೆ.
ನಾಗಾಲ್ಯಾಂಡ್ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠವಾಲೆ) ಎರಡು ಸ್ಥಾನಗಳನ್ನು ಗೆದ್ದಿದೆ.