ನಾಗಾಲ್ಯಾಂಡ್ ನ ಪೊನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಭದ್ರತಾಪಡೆಗಳು 14 ನಾಗರೀಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 11 ಮಂದಿ ನಾಗರಿಕರು ಗಾಯಗೊಂಡಿದ್ದು, ಘಟನೆಯ ನಂತರ ನಾಗಾಲ್ಯಾಂಡ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಭದ್ರತಾಪಡೆಗಳ ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಉಗ್ರರು ಎಂದು ಭಾವಿಸಿ 14 ಕಾರ್ಮಿಕರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಪ್ಯಾರಾಮಿಲಿಟರಿ ಸ್ಪೆಷಲ್ ಫೋರ್ಸ್ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ನಾಗಾಲ್ಯಾಂಡ್ ಪೊಲೀಸರು ಸ್ವಯಂ ಪ್ರೇರಿತವಾಗಿ ಉದ್ದೇಶಪೂರ್ವಕ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟ್ರಕ್‌ನಲ್ಲಿ ಎಂಟು ಜನರಿದ್ದರು. ಅವರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಟ್ರಕ್‌ನಲ್ಲಿದ್ದವರೆಲ್ಲರೂ ಸ್ಥಳೀಯ ಕಲ್ಲಿದ್ದಲು ಗಣಿಗಾರರಾಗಿದ್ದರು. ಟ್ರಕ್‌ನಿಂದ ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.
ಘಟನೆ ನಂತರ, ನೂರಾರು ಗ್ರಾಮಸ್ಥರು ಕಲ್ಲುಗಳು ಮತ್ತು ಮಾರಕಾಸ್ತ್ರಗಳಿಂದ ಶಸ್ತ್ರಸಜ್ಜಿತರಾಗಿ ಸೇನಾ ತಂಡದ ಮೇಲೆ ದಾಳಿ ಮಾಡಿದರು. ಸೇನೆಯ ತಂಡ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಕನಿಷ್ಠ ಐದು 5 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 14 ಅಮಾಯಕ ಗ್ರಾಮಸ್ಥರ ಸಾವಿಗೆ ಕಾರಣವಾದ ಕಾರ್ಯಾಚರಣೆಗೆ ಸಂಬಂಧಿಸಿದಂತೆ ನಾಗಾಲ್ಯಾಂಡ್ ಪೊಲೀಸರು ಭಾರತೀಯ ಸೇನೆಯ 21 ಪ್ಯಾರಾ ವಿಶೇಷ ಪಡೆಗಳ ವಿರುದ್ಧ ಸ್ವಯಂ ಪ್ರೇರಿತ ಎಫ್‌ಐಆರ್ ತೆಗೆದುಕೊಂಡಿದ್ದಾರೆ.
ವಿಶೇಷ ಸೇನಾ ಘಟಕವು ಪೊಲೀಸರಿಗೆ ಮಾಹಿತಿ ನೀಡಿಲ್ಲ. ಕಾರ್ಯಾಚರಣೆಗೆ ಯಾವುದೇ ಪೊಲೀಸ್ ಮಾರ್ಗದರ್ಶಿಯನ್ನು ತೆಗೆದುಕೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.