ಬೆಂಗಳೂರು: ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯ ಬಗ್ಗೆ ಸತ್ಯಾಂಶ ಅರಿಯಲು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದೆ.
ರಾಜ್ಯ ಬಿಜೆಪಿ ಘಟಕದ ವತಿಯಿಂದ ರಚಿಸಲಾಗಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ನೇತೃತ್ವದ ತಂಡ ನಾಗಮಂಗಲಕ್ಕೆ ಭೇಟಿ ನೀಡಿ ಸತ್ಯಾಂಶ ಅರಿಯಲು ಮುಂದಾಗಿದೆ.
ಶಾಸಕ ಬೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸಮಿತಿಯಲ್ಲಿದ್ದಾರೆ. ಪೊಲೀಸರ ವೈಫಲ್ಯ ನಾಗಮಂಗಲ ಘಟನೆಗೆ ಕಾರಣವೆಂದು ಸಾಬೀತಾಗಿದೆ. ಸರ್ಕಾರ ಆರಂಭದಲ್ಲಿ ಘಟನೆಯನ್ನು ಹಗುರವಾಗಿ ಪರಿಗಣಿಸಿ ಪ್ರತಿಕ್ರಿಯೆ ನೀಡಿತ್ತು. ಗುಪ್ತಚರ ವಿಭಾಗದ ಮುಖ್ಯಸ್ಥರನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ವೈಫಲ್ಯ ಒಪ್ಪಿಕೊಂಡಿದೆ ಎಂದು ಸಿ.ಎನ್. ಅಶ್ವತ್ಥ್ ನಾರಾಯಣ ಟೀಕಿಸಿದ್ದಾರೆ.