alex Certify BIG NEWS: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ಬಿಡುಗಡೆ

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂದನದಲ್ಲಿದ್ದ ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆ.11ರಂದು ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕಲ್ಲುತೂರಾಟ ಹಾಗೂ ಅಂಗಡಿಮುಂಗಟ್ಟುಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣ ಸಂಬಂಧ 55 ಆರೋಪಿಗಳನ್ನು ಬಂಧಿಸಲಾಗಿತ್ತು. ಎಲ್ಲಾ ಆರೋಪಿಗಳಿಗೂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯದ ಎಲ್ಲಾ 55 ಆರೋಪಿಗಳು ಬಿಡುಗಡೆಗೊಂಡಿದ್ದಾರೆ.

ಹಿಂದೂ ಸಮುದಾಯದ 18 ಹಾಗೂ ಮುಸ್ಲಿಂ ಸಮುದಾಯದ 37 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...