
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ಡಾ.ಸುಮಿತ್ ಅವರನ್ನು ಅಮಾನತುಗೊಳಿಸುವಂತೆ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸುಮಿತ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದಡಿಯಲ್ಲಿ ಡಿವೈಎಸ್ ಪಿ ಸುಮಿತ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ಡಿವೈ ಎಸ್ ಪಿ ಆಗಿ ಶಿವಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.