ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಆಗಿರುವ ಗಲಭೆ ಕೋಮುಗಲಭೆಯಲ್ಲ. ಯಾರೋ ಕಿಡಿಗೆಡಿಗಳು ಗಲಾಟೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸದ್ಯ ನೆಲಮಂಗಲದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಯಾವುದೇ ಅಹಿತಕರ ಘಟನೆ ನಡೆಯಲು ಪೊಲೀಸರು ಅವಕಾಶ ಕೊಡುವುದಿಲ್ಲ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ನೆಲಮಂಗಲದಲ್ಲಿ ಆಗಿರುವುದು ಕೋಮುಗಲಭೆಯಲ್ಲ. ಇದೊಂದು ಆಕಸ್ಮಿಕ ಘಟನೆ. ಅನಗತ್ಯವಾಗಿ ಕೋಮುಗಲಭೆ ಎಂದು ಯಾರೂ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿದೆ. ಗಲಾಟೆ ನಡೆದಿದೆ. ಕಿಡಿಗೇಡಿಗಳು ಯಾರೋ ಈ ರೀತಿ ಮಾಡಿದ್ದಾರೆ. ಅಂಗಡಿಗಳಿಗೆ, ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಯಾವುದೇ ಪ್ರಾಣಾಪಾಯಸಂಭವಿಸಿಲ್ಲ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನ್ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.