ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ.
ಜಾಮೀನು ಮಂಜೂರು ಮಾಡಿ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 11ರಂದು ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 55 ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ಜಾಮೀನು ದೊರೆತಿದ್ದು, ನಾಳೆ, ನಾಡಿದ್ದು ರಜೆ ಹಿನ್ನೆಲೆಯಲ್ಲಿ ಸೋಮವಾರ ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.