ಮಂಡ್ಯ : ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಲಭೆ ಸಂತ್ರಸ್ತರಿಗೆ ಹೆಚ್ಡಿಕೆ 25 ಸಾವಿರದಿಂದ 2 ಲಕ್ಷದವರೆಗೆ ಪರಿಹಾರ ವಿತರಿಸಿದ್ದಾರೆ. ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಾಗಮಂಗಲದಲ್ಲಿ ಗಲಭೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.