ಬೆಂಗಳೂರು: ನಾಗಸಂದ್ರ ಹಾಗೂ ಮಾದಾವರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೊಸದಾಗಿ ನಿರ್ಮಿಸಲಾಗಿರುವ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ.
ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಹಾಗೂ ಅವರ ತಂಡ ಪರಿಶೀಲನೆ ನಡೆಸಿದ್ದು, ನಾಗಸಂದ್ರದಿಂದ ಮಾದಾವರವರೆಗೆ ಮೆಟ್ರೋ ಸಂಚಾರಕ್ಕೆ ಸುರಕ್ಷತಾ ಆಯುಕ್ತರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯಸಂಚಾರಕ್ಕೆ ಅನುವು ನೀಡಲಾಗಿದ್ದು, ನಾಗಸಂದ್ರದಿಂದ ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರಕ್ಕೆ ಮೆಟ್ರೋ ರೈಲು ಸಂಚಾರ ನಡೆಸಲಿದೆ. 298 ಕೋಟಿ ವೆಚ್ಚದಲ್ಲಿ ನಾಲ್ಕು ಮೆಟ್ರೋ ಸ್ಟೇಷನ್ ಕಾಮಗಾರಿ ಮಾಡಲಾಗಿದೆ. ಹಸಿರು ಮಾರ್ಗ ವಿಸ್ತರಣೆಯಿಂದ ಬಿಐಇಸಿಗೆ ಸಂಪರ್ಕ ಸುಲಭವಾಗಲಿದ್ದು, ಬೆಂಗಳೂರು ಪ್ರವ್ರ‍್ಶಿಸುವವರಿಗೂ ಹೆಚ್ಚಿನ ಅನುಕೂಲವಾಗಲಿದೆ.