
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಯ ರೂವಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಫಾಹಿದ್ ಖಾನ್ ಬಂಧಿತ ಆರೋಪಿ. ಫಾಹಿದ್ ಖಾನ್ ಪ್ರಚೋದನಕಾರು ಭಾಷಣೆವೇ ಗಲಭೆಗೆ ಕಾರಣವಾಗಿದೆ. ಇದರಿಂದಾಗಿ ಹಲವರು ಗಾಯಗೊಂಡು, ನಾಗ್ಪುರದಲ್ಲಿ ಅಶಾಂತಿ ಸೃಷ್ಟಿಯಾಗಿದೆ ಎನ್ನಲಾಗಿದೆ.
ನಾಗ್ಪುರ ಹಿಂಸಾಚಾರ ಪ್ರಕರಣ ಸಂಬಂಧ ಫಾಹೀದ್ ಖಾನ್ ವಿರುದ್ಧ ಗಣೇಶಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಗ್ಪುರ ಪೊಲೀಸರು ಫಾಹೀದ್ ಖಾನ್ ನನ್ನು ಬಂಧಿಸಿದ್ದಾರೆ.
ಬಂಧನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಫಾಹಿದ್ ಖಾನನ್ನು ಮಾರ್ಚ್ 21ರವರೆಗೆ ಪೊಲಿಸ್ ಕಸ್ಟಡಿಗೆ ಪಡೆಯಲಾಗಿದೆ.