
ನಾಗ್ಪುರ: ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಂಸಪುರಿ ಪ್ರದೇಶದಲ್ಲಿ ಮತ್ತೊಂದು ಹಿಂಸಾಚಾರ ಘಟನೆ ನಡೆದಿದೆ. ಮುಂಜಾಗೃತಾ ಕ್ರಮವಾಗಿ ನಾಗ್ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೊಘಲ್ ದೊರೆ ಔರಂಗಾಜೇಬ್ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಭಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್ ಸುಟ್ಟುಹಾಕಲಾಗಿದೆ ಎಂಬ ವದಂತಿ ಹಬ್ಬಿತ್ತು. ಈ ಸುದ್ದಿಇ ಬೆನ್ನಲ್ಲೇ ನಾಗ್ಪುರದ ಕೇಂದ್ರ ಭಾಗದಲ್ಲಿ ಹಿಂಸಾಚಾರ ಆರಂಭವಾಗಿದೆ.
ತಡರಾತ್ರಿ ಚಿಟ್ನಿಸ್ ಹಾಗೂ ಮಹಲ್ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸರು ಸೇರಿ 15 ಜನರು ಗಾಯಗೊಂಡಿದ್ದಾರೆ. ಹಂಸಪುರಿಯಲ್ಲಿಯೂ ಮತ್ತೆ ಘರ್ಷಣೆ ನಡೆದಿದೆ. ಉದ್ರಿಕ್ತರ ಗುಂಪು ವಾಹನಗಳಿಗೆ ಬೆಂಕ್ ಹಚ್ಚಿದ್ದಾರೆ. ಶರದ್ ಗುಪ್ತಾ ಎಂಬುವವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಮನೆ ಮುಂದೆ ಇಇದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗ್ಪುರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.