ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿ ಯೂಟರ್ನ್ ಹೊಡೆದ ಘಟನೆ ನಡೆದಿದೆ.
ಮೊಹಮ್ಮದ್ ನಲಪಾಡ್ ಹಾಗೂ ಅವರ ಬೆಂಬಲಿಗರು ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ಹಲ್ಲೆ ಕುರಿತ ಕೆಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮೊಹಮ್ಮದ್ ನಲಪಾಡ್ ತಾವು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಇದು ತನ್ನ ವಿರುದ್ಧ ನಡೆಸುತ್ತಿರುವ ಷಡ್ಯಂತ್ರ ಎಂದಿದ್ದರು.
BIG NEWS: ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ FIR ದಾಖಲು…!
ಮೊಹಮ್ಮದ್ ನಲಪಾಡ್ ಹೇಳಿಕೆ ಬೆನ್ನಲ್ಲೇ ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ, ನನ್ನ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ನಲಪಾಡ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸುಳ್ಳು. ನಾನು ಆರಾಮವಾಗಿದ್ದೆನೆ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಇದ್ದೇವೆ. ಇದೆಲ್ಲವೂ ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.