
ಹೊಸಪೇಟೆ: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದರು.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದವರನ್ನು ಬಿಡುವುದಿಲ್ಲ. ಎಷ್ಟೇ ದೊಡ್ಡವರಾದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಯಾರನ್ನೂ ರಕ್ಷಣೆ ಮಾಡುವಂತಹ ಪ್ರಶ್ನೆಯೇ ಇಲ್ಲ ಎಂದು ಕಟೀಲು ಹೇಳಿದ್ದಾರೆ.