alex Certify BIG NEWS: ಭ್ರಷ್ಟ ಆಡಳಿತ ವಿರೋಧಿಸಿ ನಾಳೆಯಿಂದ ಎರಡು ದಿನ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ನಳೀನ್ ಕುಮಾರ್ ಕಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭ್ರಷ್ಟ ಆಡಳಿತ ವಿರೋಧಿಸಿ ನಾಳೆಯಿಂದ ಎರಡು ದಿನ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ನಳೀನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾಳೆ ಸೋಮವಾರ ಹಾಗೂ ಮಂಗಳವಾರ ಎರಡು ದಿನ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ಹಾಗೂ ಮಂಡಲಗಳ ಅಧ್ಯಕ್ಷರ ನೇತೃತ್ವದಲ್ಲಿ ಮಂಗಳವಾರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರ್ಕಾರವಿದು. ಕಲಾವಿದರನ್ನೂ ಬಿಟ್ಟಿಲ್ಲ. ತಮ್ಮ ಬಳಿ ಲಂಚ ಕೇಳುತ್ತಿದ್ದಾರೆ ಎಂದು ಕಲಾವಿದರೇ ಆರೋಪಿಸುತ್ತಿದ್ದಾರೆ. ಹಿಂದೆ ಎಟಿಎಂ ಸರ್ಕಾರ ಬರುತ್ತೆ ಎಂದು ಹೇಳಿದ್ದಕ್ಕೆ ಸಾಕ್ಷಿ ಕೊಡಿ ಎಂದಿದ್ದರು. ಈಗ ಸಾಕ್ಷಿ, ಆಧಾರಗಳನ್ನು ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಜನರ ಮುಂದೆ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...