alex Certify BIG NEWS: ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್…​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್…​..!

ಆರ್​​ಎಸ್​ಎಸ್​ನದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಭರ್ಜರಿ ಟಾಂಗ್​ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು.

ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್​ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ ಪ್ರಶಾಂತ್​ ಪೂಜಾರಿ, ಶರತ್​ ಮಡಿವಾಳ, ದೀಪಕ್​ ರಾವ್​, ಮಡಿಕೇರಿ ಕುಟ್ಟಪ್ಪ ಎಲ್ಲರೂ ಸಿದ್ದರಾಮಯ್ಯ ಆಡಳಿತಾವಧಿಯಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ರು.

ಎಟಿಎಂ ಒಳಗೆ ಹೋದ ಮಹಿಳೆಯ ಮೇಲೆ ಹಲ್ಲೆಯಾಯ್ತು. ಸುಳ್ಯದಲ್ಲಿ ಕಾಲೇಜಿಗೆ ಹೋದ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಯ್ತು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯ ಆಡಳಿತ ತಾಲಿಬಾನ್​ ಆಡಳಿತವಾಗಿದೆ. ಇದೇ ಕಾರಣಕ್ಕೆ ನಾನು ಸಿದ್ದರಾಮಯ್ಯರನ್ನು ಭಯೋತ್ಪಾದಕ ಎಂದು ಕರೆಯುತ್ತೇನೆ. ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದಲ್ಲಿ ಪ್ರತಿ ದಿನ ಕೊಲೆ, ಸುಲಿಗೆಗಳು ನಡೆಯುತ್ತಿದ್ದವು ಎಂದು ಕಿಡಿ ಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...