
ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಗ್ರಾಮಸ್ವರಾಜ್ ಯಾತ್ರೆ ಕೈಗೊಳ್ಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮಸ್ವರಾಜ್ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ನವೆಂಬರ್ 27 ರಿಂದ ಡಿಸೆಂಬರ್ 3 ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾತ್ರೆ ಸಂಘಟಿಸಲಾಗಿದೆ. ಮೂರ್ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಒಟ್ಟಿಗೆ ಸೇರಿಸಿ ಪ್ರತಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಸ್ವರಾಜ್ ಯಾತ್ರೆ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ಶೇಕಡ 60 ರಷ್ಟು ಪೂರ್ಣಗೊಂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಗೆ ಶೀಘ್ರವೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.