ಬೆಳಗಾವಿ: ಬೆಳಗಾವಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಸ್ವರಾಜ್ ಪರಿಕಲ್ಪನೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಲಾಗಿದೆ. ಗ್ರಾಮಗಳನ್ನು ಅಭಿವೃದ್ಧಿ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಎರಡು ಪ್ರಮುಖ ವಿಧೇಯಕ ಜಾರಿಗೆ ತರುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೋಹತ್ಯೆ ನಿಷೇಧ, ಲವ್ ಜಿಹಾದ್ ನಿಷೇಧ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.