ಬೆಂಗಳೂರು: ಗ್ಯಾಸ್ ಪೈಪ್ ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಎಸ್.ಎ. ರಾಮದಾಸ್ ಹಾಗೂ ಎಲ್. ನಾಗೇಂದ್ರ ಅವರ ನಡುವೆ ಆರೋಪ-ಪ್ರತ್ಯಾರೋಪ ಕೇಳಿಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಧ್ಯ ಪ್ರವೇಶಿಸಿದ್ದಾರೆ.
ಈ ಮೂವರಿಗೂ ಕರೆ ಮಾಡಿದ ನಳಿನ್ ಕುಮಾರ್ ಕಟೀಲ್ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ತರುವ ಕೆಲಸ ಮಾಡಬೇಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ಶಾಸಕರು ಮತ್ತು ಸಂಸದರ ನಡುವಿನ ಭಿನ್ನಾಭಿಪ್ರಾಯದಿಂದ ಬಿಜೆಪಿಯಲ್ಲಿ ಸಂಘರ್ಷ ನಡೆಯುತ್ತಿದೆ ಎನ್ನುವಂತಾಗಿದೆ. ಹೀಗಾಗಿ ಶಿಸ್ತು ಉಲ್ಲಂಘಿಸದೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಕರೆ ಮಾಡಿದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.
ಪಕ್ಷ ಸಂಘಟನೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಮುಕ್ತವಾಗಿ ಹಂಚಿಕೊಳ್ಳಬೇಕು. ಮಾಧ್ಯಮಗಳ ಎದುರು ಚರ್ಚೆ ನಡೆಸಬಾರದು. ಪಕ್ಷದ ವೇದಿಕೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.