ಬೆಂಗಳೂರು: ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆಯುವ ಮೂಲಕ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
2023ರ ನವೆಂಬರ್ 4ರಂದು ಲೋಕಸೇವಾ ಆಯೋಗದಿಂದ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಪತ್ರಲೇಖನದಲ್ಲಿ ಅಭ್ಯರ್ಥಿಗಳು ತಮ್ಮ ಅಭ್ಯರ್ಥಿತನ ಬಹಿರಂಗಪಡಿಸಿದ್ದಾರೆ. ಇ-ಮೇಲ್ ಮತ್ತು ಅಂಚೆ ಮೂಲಕ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 4ರೊಳಗೆ ಸಮಜಾಯಿಸಿ ನೀಡಲು ಸೂಚಿಸಲಾಗಿದೆ.
ಇಲ್ಲವಾದಲ್ಲಿ ಏಕಪಕ್ಷೀಯವಾಗಿ ಆಯೋಗದಿಂದ ಅಭ್ಯರ್ಥಿತನ ರದ್ದುಗೊಳಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.