ಬೆಂಗಳೂರು: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಬಿಎಂ ಆರ್ ಸಿಎಲ್ ಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಇದೀಗ ನೂತನ ನಿರ್ದೇಶಕರಾಗಿ ಮಹೇಶ್ ರಾವ್ ಅವರನ್ನು ನೇಮಕ ಮಾಡಲಾಗಿದೆ.
ಬಿಎಂ ಆರ್ ಸಿ ಎಲ್ ಮುಖ್ಯಸ್ಥ ಅಂಜುಂ ಫರ್ವೇಜ್ ಜಾಗಕ್ಕೆ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.