
ಬೆಂಗಳೂರು: ನಮ್ಮ ಮೆಟ್ರೋ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿ ಬಿಎಂಆರ್ ಸಿಎಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಬಿಎಂಆರ್ ಸಿಎಲ್ ಧೋರಣೆಗೆ ಧಿಕ್ಕಾರ ಕೂಗಿದರು. ಪ್ರತಿಬಾರಿ ಮೆಟ್ರೋ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ತಕ್ಷಣ ಇದನ್ನು ಸರಿಪಡಿಸಿ ಕನ್ನಡಿಗರಿಗೂ ನೇಮಕಾತಿ ನೀಡುವಂತೆ ಆಗ್ರಹಿಸಿದರು.
ಇದೇ ವೇಳೆ ಕರವೇ ಕಾರ್ಯಕರ್ತರು ಬಿಎಂಆರ್ ಸಿಎಲ್ ಕಚೇರಿಗೆ ನುಗ್ಗಿ, ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಗಂಭೀರತೆ ಅರಿತ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ್ ರಾವ್, ಪ್ರತಿಭಟನಾಕಾರರ ಬಳಿ ಬಂದು ಅವರ ಮನವಿಯನ್ನು ಆಲಿಸಿದರು.