ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಹಾಗೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಿಟ್ಟಿನಲ್ಲಿ ಬಿಎಂಆರ್ ಸಿಎಲ್ ಮಹತ್ವದ ಕ್ರಮ ಕೈಗೊಂಡಿದೆ.
ಇನ್ಮುಂದೆ ಮೆಟ್ರೋದಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದ ಪ್ರಕರಣ ಕಂಡುಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದಲ್ಲದೇ 10,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪ್ರಯಾಣಿಕರ ಜೊತೆ ಕೆಲ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸಿದ್ದ ಘಟನೆ ಬೆಳಕಿಗೆ ಬಂದಿತ್ತು. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಪ್ರಶ್ನೆ ಉದ್ಭವವಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಬಿಎಂಆರ್ ಸಿಎಲ್ ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದವರ ವಿರುದ್ಧ ಭಾರಿ ದಂಡ ಪ್ರಯೋಗ ಹಾಗೂ ಕೇಸ್ ದಾಖಲು ಮಾಡಲು ನಿರ್ಧರಿಸಿದೆ.