alex Certify BIG NEWS: ಲುಲು ಮಾಲ್ ಬಳಿಕ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲುಲು ಮಾಲ್ ಬಳಿಕ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಇತ್ತೀಚೆಗೆ ಕಾಮುಕನೊಬ್ಬ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ನಿವೃತ್ತ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಬಳಿಕ ಇದೀಗ ನಮ್ಮ ಮೆಟ್ರೋದಲ್ಲಿ ಯುವತಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ನವೆಂಬರ್ 20ರಂದು ಯುವತಿ ಮೆಟ್ರೋ ರೈಲಿನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೆಳಿಗ್ಗೆ 8:30ರ ಸುಮಾರಿಗೆ ಮೆಟ್ರೋದಲ್ಲಿ ಕಾಮುಕನೊಬ್ಬ ಯುವತಿಗೆ ಹಿಂಬದಿಯಿಂದ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.

ಸಹಾಯಕ್ಕಾಗಿ ಯುವತಿ ಅಂಗಲಾಚಿದರೂ ಸಹ ಪ್ರಯಾಣಿಕರು ನೆರವಿಗೆ ಬಂದಿಲ್ಲ. ಈ ವಿಚಾರವನ್ನು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿದ್ದಾರೆ. ಕೃತ್ಯ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್ ಸಿ ಎಲ್, ಘಟನೆ ಬಗ್ಗೆ ಈವರೆಗೂ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ ಪರಿಶೀಲನೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...