ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ನಂದಿ ಗಿರಿಧಾಮದಲ್ಲಿ ಮೂರು ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 30 ರಂದು ಸಂಜೆ 6 ಗಂಟೆಯಿಂದ ಜನವರಿ 2 ರಂದು ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ ಎಂದು ಹೇಳಲಾಗಿದೆ.