alex Certify BIG BREAKING: ಭಾರಿ ಮಳೆಗೆ ನಂದಿಬೆಟ್ಟದಲ್ಲಿ ಎಂದೂ ಆಗದ ಅವಘಡ, ಗುಡ್ಡ ಕುಸಿದು ಸಂಪರ್ಕ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರಿ ಮಳೆಗೆ ನಂದಿಬೆಟ್ಟದಲ್ಲಿ ಎಂದೂ ಆಗದ ಅವಘಡ, ಗುಡ್ಡ ಕುಸಿದು ಸಂಪರ್ಕ ಬಂದ್

ಚಿಕ್ಕಬಳ್ಳಾಪುರ: ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದಾಗಿ ನಂದಿ ಗಿರಿಧಾಮದ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

ನಂದಿ ಬೆಟ್ಟದ ಮೇಲಿನ ರಂಗಪ್ಪ ಸರ್ಕಲ್ ಬಳಿ ಗುಡ್ಡ ಕುಸಿತವಾಗಿದ್ದು, ನಂದಿಬೆಟ್ಟ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಪೊಲೀಸರು ತಡೆ ನೀಡಿದ್ದಾರೆ. ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಸಂಪರ್ಕ ರಸ್ತೆ ಬಂದ್ ಆಗಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, ಇದರಿಂದಾಗಿ ಗುಡ್ಡ ಕುಸಿದಿದೆ. ಭಾರೀ ಪ್ರಮಾಣದ ಮಣ್ಣು ರಸ್ತೆ ಬಿದ್ದು, ಸಂಪರ್ಕ ಬಂದ್ ಆಗಿದ್ದು, ಭಾರೀ ಪ್ರಮಾಣದ ಮಣ್ಣು ಕುಸಿದು, ಮರಗಳು, ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...