
ಬೆಂಗಳೂರು: ಗುಣಮಟ್ಟವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಕೆಎಂಎಫ್ ನಂದಿನಿ ದೋಸೆ ಹಿಟ್ಟಿನ ಉತ್ಪಾದನಾ ಘಟಕವನ್ನು ನಿರ್ಮಿಸುವ ಪ್ರಸ್ತಾವನೆ ಹೊಂದಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ತಿಳಿಸಿದ್ದಾರೆ.
ಖಾಸಗಿ ಸಂಸ್ಥೆ ಉತ್ಪಾದಿಸಿದ ದೋಸೆ ಹಿಟ್ಟನ್ನು ನಂದಿನಿ ಬ್ರ್ಯಾಂಡ್ ನಡಿ ಮಾರಾಟ ಮಾಡುವ ಪ್ರಸ್ತಾಪವನ್ನು ಆರು ತಿಂಗಳ ಹಿಂದೆಯೇ ತಡೆ ಹಿಡಿಯಲಾಗಿದೆ. ಸ್ವಂತ ಉತ್ಪಾದನಾ ಘಟಕ ಆರಂಭಿಸುವ ಪ್ರಸ್ತಾಪವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ದೋಸೆ ಹಿಟ್ಟಿನ ಗುಣಮಟ್ಟ ವ್ಯತ್ಯಾಸವಾದಲ್ಲಿ ನಂದಿನಿ ಬ್ರ್ಯಾಂಡ್ ಗೆ ಧಕ್ಕೆಯಾಗುತ್ತದೆ. ಹೀಗಾಗಿ ಪ್ರಸ್ತಾಪ ತಡೆಹಿಡಿಯಲಾಗಿದ್ದು, ಸ್ವಂತ ಘಟಕ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
