ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣ ಇದಾಗಿದ್ದು, ಕೇಸ್ ಗೆ ಸಂಬಂಧಿಸಿದಂತೆ ನಂಗಲಿ ಠಾಣೆ ಪಿಎಸ್ ಐ, ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಳಬಾಗಿಲು ಡಿವೈಎಸ್ ಪಿ ನಂದಕುಮಾರ್ ವರದಿ ಆಧರಿಸಿ ಪಿಎಸ್ಐ ಪ್ರದೀಪ್ ಸಿಂಗ್, ಕಾನ್ಸ್ ಟೇಬಲ್ ಗಳಾದ ಮಂಜುನಾಥ್, ಮಹಾಂತೇಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳ್ಳತನ ಪ್ರಕರಣ ಸಂಬಂಧ ಅ.17ರಂದು ಆರೋಪಿಗಳಾದ ಮುನಿರಾಜು, ಬಾಲಾಜಿ ಎಂಬುವವರನ್ನು ಠಾಣೆಗೆ ಕರೆತಂದು ಅಕ್ರಮವಾಗಿ ವಿಚಾರಣೆ ನಡೆಸಿದ್ದರು. ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ 15 ದಿನಗಳ ಕಾಲ ಪೊಲೀಸ್ ಠಾಣೆ, ಬೇರೆ ಬೇರೆ ಸ್ಥಳಗಳಲ್ಲಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ಆಂಧ್ರದ ಮದನಪಲ್ಲಿ ನಿವಾಸಿ ಮುನಿರಾಜು ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಪಿಎಸ್ ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.