alex Certify ಪತ್ನಿಯೊಂದಿಗೆ ಜಗಳವಾಡಿದ ಪತಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯೊಂದಿಗೆ ಜಗಳವಾಡಿದ ಪತಿಯಿಂದ ಘೋರ ಕೃತ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದಲ್ಲಿ ಘಟನೆ ನಡೆದಿದೆ.

ರೂಪಾ(35) ಕೊಲೆಯಾದ ಮಹಿಳೆ. ಪತಿ ಪುರುಷೋತ್ತಮ್(40) ಪತ್ನಿ ಕೊಲೆ ಮಾಡಿದ್ದಾನೆ. 8 ವರ್ಷದ ಹಿಂದೆ ರೂಪಾ ಮತ್ತು ಪುರುಷೋತ್ತಮ್ ಅವರ ಮದುವೆಯಾಗಿತ್ತು. ಆಗಾಗ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪುರುಷೋತ್ತಮ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...