ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆಯವರಿಗೆ ಜಾಮೀನು ನೀಡಲಾಗಿದೆ. ಮಹಾರಾಷ್ಟ್ರದ ಮಹಾದ್ ಕೋರ್ಟ್ ನಿಂದ ಅವರಿಗೆ ಜಾಮೀನು ದೊರೆತಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ನಾರಾಯಣ ಹೇಳಿದ್ದರು. ಅವರ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದರು. ರತ್ನಗಿರಿ ಪೊಲೀಸರು ನಾರಾಯಣ ರಾಣೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ನಂತರ ಅವರಿಗೆ ಜಾಮೀನು ನೀಡಲಾಗಿದೆ.
ಈ ಮೂಲಕ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾ ಆಘಾಡಿ ಸರ್ಕಾರದ ನೇತೃತ್ವ ವಹಿಸಿಕೊಂಡಿರುವ ಸಿಎಂ ಠಾಕ್ರೆ ಮತ್ತು ಬಿಜೆಪಿ ನಡುವೆ ಮತ್ತೊಂದು ಸಂಘರ್ಷ ಶುರುವಾಗಿದ್ದು, ಪ್ರಕರಣದ ಬಗ್ಗೆ ಶಿವಸೇನೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.