ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕ ಕಡ್ಡಾಯವಾಗಿ ಆರಂಭಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್ಲಾ ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕವನ್ನು ಕಡ್ಡಾಯವಾಗಿ ಆರಂಭಿಸಬೇಕು. ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಎನ್ಎಸ್ಎಸ್ ಸ್ವಯಂ ಸೇವಕರು ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.