alex Certify ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಹಳೆ ಪ್ರಕರಣಗಳ ಸಂಬಂಧ ಮತ್ತೆ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್, ಹಲಸೂರು ಗೇಟ್ ಠಾಣೆ ಪೊಲೀಸರು ಇದಕ್ಕಾಗಿ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 2017ರಲ್ಲಿ ಎನ್‌ಡಿಎಂಎ ಆಕ್ಟ್ ನಡಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿತ್ತು. ನಾರಾಯಣ ಗೌಡರ ವಿರುದ್ಧ 2 ಕೇಸ್ ಗಳ ಸಂಬಂಧ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಿರಿಯ ಅಧಿಕಾರಿಗಳ ಸೂಚನೆಯಂತೆ ಪೊಲೀಸರು ನಾರಾಯಣಗೌಡರ ವಿರುದ್ಧದ ಹಳೆ ಕೇಸ್ ಗಳನ್ನು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀ ಓಪನ್ ಮಾಡಿ ಮರು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...