ಮಂಡ್ಯ: ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವ ನಿರ್ಧಾರಕ್ಕೆ ಬರಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಮತ್ತು ಗಣಿ ಸಚಿವರಿಗೆ ಹಾಗೂ ಜಿಲ್ಲೆಯ ಜನ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡುತ್ತವೆ ಎಂದು ಅವರು ತಿಳಿಸಿದ್ದಾರೆ.
ಟ್ರಯಲ್ ಬ್ಲಾಸ್ಟ್ ನಡೆಸುವುದು, ಮತ್ತೆ ಗಣಿಗಾರಿಕೆಗೆ ಅವಕಾಶ ಕೊಡುವುದು, ಮತ್ತೆ ಡ್ಯಾಮ್ ಭದ್ರತೆ ಚರ್ಚೆ ವಿಚಾರ ಬಂದಾಗ ಏನು ಮಾಡುವುದು? ಹಾಗಾಗಿ, ಈ ತಲೆನೋವು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದು, ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
8 ಚೆಕ್ ಪೋಸ್ಟ್ ನಿರ್ಮಾಣ, ಅಕ್ರಮ ಗಣಿಗಾರಿಕೆಗೆ ತಕರಾರು ಇಲ್ಲ. ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಪರಿಶೀಲನೆ ನಡೆಸಿದ್ದು. ಕೆಆರ್ಎಸ್ ಡ್ಯಾಮ್ ಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.