
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಕೂಲಿ ಹಣವನ್ನು ಬ್ಯಾಂಕ್ ಗಳು ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಆಯುಕ್ತಾಲಯದಿಂದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬ್ಯಾಂಕ್ ಗಳು ಕೂಲಿ ಕಾರ್ಮಿಕರ ಸಾಲ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬ ದೂರುಗಳು ಕೇಳಿಬಂದಿವೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹೇಮನಗೌಡ ಮೊದಲಾದವರು ಆಯುಕ್ತಾಲಯಕ್ಕೆ ಈ ಕುರಿತು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬ್ಯಾಂಕ್ ಗಳು ಸಾಲ ಮಾಡದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.