ನವದೆಹಲಿ: ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನರೇಗಾ ಯೋಜನೆಯಡಿ 100 ದಿನಗಳ ಉದ್ಯೋಗ ಕಲ್ಪಿಸಲಿದ್ದು, ಈ ಸಂಖ್ಯೆಯನ್ನು ವಿಸ್ತರಿಸುವ ಪ್ರಸ್ತಾಪವಿಲ್ಲ ಎಂದು ಸಚಿವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಉದ್ಯಮ ವಲಯದ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಅವರು, ಅಗತ್ಯವಿದ್ದಲ್ಲಿ ನರೇಗಾ ಯೋಜನೆಯ ಅನುದಾನವನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.