ಕಲಬುರ್ಗಿ: ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ.
ಶರಣಪ್ಪ ಸಮಗಾರ (42) ಮೃತ ದುರ್ದೈವಿ. ವ್ಯಕ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.