
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜೀವ್ ಲಲ್ಲನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. ವೀರೇಂದ್ರ ಕುಮಾರ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅವರೊಂದಿಗೆ ಪಿಯುಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.