ನವದೆಹಲಿ : ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ. ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ.