ನವದೆಹಲಿ: 2024ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಭಾನುವಾರ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 ರಲ್ಲಿ ಬಿಜೆಪಿ-ಜೆಡಿಯು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂದರು.
2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಗಳ ಬಗ್ಗೆ ಬಿಸಿ ಚರ್ಚೆ ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ನಿವೃತ್ತಿ ಮತ್ತು ಹೊಸ ಮುಖಗಳ ಪಟ್ಟಾಭಿಷೇಕದ ಬಗ್ಗೆ ಆಗಾಗ್ಗೆ ಊಹಾಪೋಹಗಳು ಹರಿದಾಡಿವೆ. 2024 ರಲ್ಲಿ ನರೇಂದ್ರ ಮೋದಿ ಅವರನ್ನು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಕೇಂದ್ರ ಸಚಿವ ಮತ್ತು ಮಾಜಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಹಸ್ಯವನ್ನು ಬಿಚ್ಚಿಟ್ಟು, 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರು.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, 2024ರ ಲೋಕಸಭೆ ಮತ್ತು 2025ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿವೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ’ ಎಂದರು.
2024ರ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು, ಅವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದರು.