ನವದೆಹಲಿ: ರೈತರೊಂದಿಗೆ ಇದುವರೆಗೆ 48 ಗಂಟೆಗಳ ಕಾಲ ಚರ್ಚೆ ನಡೆದಿದೆ. 11 ಸಭೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ರೈತರ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ರೈತರ ಪ್ರಗತಿಯೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತರ ಅಭಿವೃದ್ಧಿಗಾಗಿ ಹೊಸ ಕೃಷಿ ನೀತಿ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷಗಳು ರೈತರ ದಾರಿ ತಪ್ಪಿಸುವ ಕೆಲಸ ಮಾಡಿವೆ. ಪರಿಸ್ಥಿತಿಯನ್ನು ಕೆಲವರು ಲಾಭ ಮಾಡಿಕೊಳ್ಳುತ್ತಿದ್ದಾರೆ. ಕೆಲವರಿಗೆ ಕೃಷಿ ಕ್ಷೇತ್ರದ ಅಭಿವೃದ್ಧಿ ಇಷ್ಟವಿಲ್ಲ ಎಂದು ಆರೋಪಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ಮುಂದುವರೆಸಿದ್ದು, 11 ಸಭೆಗಳು ನಡೆದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.