
126 ಜನರನ್ನು ಹೊತ್ತೊಯ್ಯುತ್ತಿದ್ದ ಡೊಮಿನಿಕನ್ ರಿಪಬ್ಲಿಕ್ ಏರ್ ಕ್ಯಾರಿಯರ್ ರೆಡ್ ಏರ್ಗೆ ಸೇರಿದ ವಿಮಾನವು ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಕ್ರ್ಯಾಶ್ ಆಗಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ನೆಲಕ್ಕೆ ಅಪ್ಪಳಿಸಿದಾಗ ವಿಮಾನಕ್ಕೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿತು, ಆದರೆ ಪ್ರಯಾಣಿಕರಿಗೆ ಯಾವುದೇ ಗಂಭೀರ ಗಾಯಗಳು ವರದಿಯಾಗಿಲ್ಲ. ಮೂವರನ್ನು ಸಣ್ಣಪುಟ್ಟ ಗಾಯಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೊಮಿನಿಕನ್ ರಿಪಬ್ಲಿಕ್ನ ಸ್ಯಾಂಟೊ ಡೊಮಿಂಗೊದಿಂದ ಯುನೈಟೆಡ್ ಸ್ಟೇಟ್ಸ್ನ ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರೆಡ್ ಏರ್ ವಿಮಾನದಲ್ಲಿ ಲ್ಯಾಂಡಿಂಗ್ ಗೇರ್ ಕುಸಿತವು ಈ ಘಟನೆಗೆ ಕಾರಣವಾಯಿತು.
ಬೆಂಕಿ ಹೊತ್ತಿಕೊಳ್ಳುವ ಸಂದರ್ಭದಲ್ಲಿ ಪ್ರಯಾಣಿಕರು ಆತಂಕದಿಂದ ಹೊರಗೆ ಓಡಿ ಬರುವುದು, ಅಗ್ನಿ ಶಾಮಕ ತಂಡ ಬೆಂಕಿ ನಿಯಂತ್ರಣಕ್ಕೆ ತರುವ ಪ್ರಯತ್ನವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.