ದೆಹಲಿ ವಿಧಾನಸಭಾ ಎಲೆಕ್ಷನ್ ಬಿಜೆಪಿ ಸ್ಪಷ್ಟ ಬಹುಮತದತ್ತ ದಾಪುಗಾಲು ಹಾಕುತ್ತಿದೆ ಬಿಜೆಪಿ 42 ಕ್ಷೇತ್ರದಲ್ಲಿ ಮುನ್ನಡೆಯಲಿದೆ .
ಇನ್ನು ಆಡಳಿತರೂಢ ಎಎಪಿ 28 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಿಜೆಪಿ 27 ವರ್ಷಗಳ ನಂತರ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಎಲ್ಲಾ ಲಕ್ಷಣಗಳು ಕಂಡುಬರುತ್ತದೆ. ಸದ್ಯ ಮುಖ್ಯಮಂತ್ರಿ ಆಗಿರುವ ಅತಿಶಿ ನಿರಂತರವಾಗಿ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.