alex Certify ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇತುವೆ, ರಸ್ತೆ ಕುಸಿತ – ಭಾರಿ ವಾಹನ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇತುವೆ, ರಸ್ತೆ ಕುಸಿತ – ಭಾರಿ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ಶಿವಮೊಗ್ಗ -ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಮತ್ತು ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾ.ಹೆ. 766(ಸಿ) ರಲ್ಲಿ ಬರುವ ನಗರ- ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ  ಈ ರಸ್ತೆಗಳ ಮೂಲಕ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.

ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾಪುರ (ಎನ್.ಹೆಚ್.69) ಮಾರ್ಗವಾಗಿ ಸಂಚರಿಸುವುದು.

ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ-ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು ಶಿವಮೊಗ್ಗ –ಕೊಪ್ಪ-ಕಾರ್ಕಳ-ಮಂಗಳೂರು (ಎಸ್.ಹೆಚ್.57,65 ಮತ್ತು ಎನ್.ಹೆಚ್.169) ಮಾರ್ಗದಲ್ಲಿ ಸಂಚರಿಸುವುದು.

ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರಿ ವಾಹನಗಳು ಶಿವಮೊಗ್ಗ -ಹೊಸನಗರ- ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.

ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರಿ ವಾಹನಗಳು ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು ಮಾರ್ಗಗಳ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಅದೇಶದಲ್ಲಿ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...