ಬೆಂಗಳೂರು: ಬಟ್ಟೆ ಕೊಳಕಾಗಿದ್ದ ಕಾರಣಕ್ಕೆ ರೈತರೊಬ್ಬರಿಗೆ ಬೆಂಗಳೂರು ಮೆಟ್ರೋ ನಿಲ್ದಾಣದೊಳಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಬಿ.ಎಂ.ಆರ್.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
4 ವಾರಗಳಲ್ಲಿ ಪ್ರಕರಣದ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಕೈಗೊಳ್ಳುವ ಉಪಕ್ರಮಗಳ ವಿವರ ನೀಡುವಂತೆ ಆಯೋಗ ತಿಳಿಸಿದೆ.
ಫೆಬ್ರವರಿ 18ರಂದು ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿತ್ತು. ಯಾವುದೇ ವ್ಯಕ್ತಿ ಧರಿಸಿದ ಬಟ್ಟೆಯ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಗೆ ಪ್ರವೇಶ ನಿರಾಕರಿಸುವಂತಿಲ್ಲ. ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದರೆ ಮಾತ್ರ ತಡೆಯಬಹುದು ಎಂದು ಆಯೋಗ ತಿಳಿಸಿದೆ.